ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿನ್ನರ್ ಮೀಟಿಂಗ್ ಗೆ ಹೈಕಮಾಂಡ್ ಬ್ರೇಕ್ ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಾ.ಜಿ.ಪರಮೇಶ್ವರ್, ಡಿನ್ನರ್ ಮೀಟಿಂಗ್ ರದ್ದಾಗಿಲ್ಲ, ಮುಂದೂಡಲಾಗಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ನಮ್ಮ ಸಭೆಯನ್ನು ಸಹಿಸುವುದಿಲ್ಲ ಎಂದು ಯಾರೂ ಹೇಳಿಲ್ಲ. ಸಭೆ ಮುಂದುದಲಾಗಿದೆ ಅಷ್ಟೇ. ಸಭೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಂಡ್ ಗೆ ಸಭೆ ಬಗ್ಗೆ ದೂರು ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಸಭೆಗೆ ಡಿ.ಕೆ.ಶಿವಕುಮಾರ್ ಅವರನ್ನೂ ಕರೆಯುತ್ತೇವೆ. ರಾಜಕಾರಣ ಮಾಡುವುದಾದರೆ ಓಪನ್ ಆಗಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ.