ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಡಿಪ್ಲೊಮಾ ವಿದ್ಯಾರ್ಥಿ ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮುರುಗೇಶಪಾಳ್ಯದ ನಿವಾಸಿ, ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ವಿಕಾಸ್ (19) ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ ಮೃತ ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಈಜಲು ಹೋಗಿದ್ದಾರೆ.
ನೀರಿನಲ್ಲಿ ಕೆಲವೇ ನಿಮಿಷಗಳಲ್ಲಿ ವಿಕಾಸ್ ಆಳಕ್ಕೆ ಸಿಲುಕಿ ಮುಳುಗಲು ಆರಂಭಿಸಿದ್ದಾನೆ. ಕೂಡಲೇ ಸ್ನೇಹಿತರು ಪೊಲೀಸರು ಹಾಗೂ ಅಗ್ನಿಶಾಮಕ ದಳ ಮತ್ತು ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಸುಮಾರು 6 ಗಂಟೆಗಳ ಹುಡುಕಾಟದ ಬಳಿಕ ವಿಕಾಸ್ ಮೃತದೇಹ ಪತ್ತೆಯಾಗಿದೆ. ಇದೀಗ ಮೃತದೇಹವ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಮರಣ ವರದಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.