ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದರೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ರಾಜಕೀಯ ಅಬ್ಬರ ಕಡಿಮೆಯಾಗಿಲ್ಲ. ಇದೀಗ ಅವರು ಸಿಡಿಸಿರುವ ಹೊಸ ಬಾಂಬ್ ಕೇಸರಿ ಪಡೆಯಲ್ಲಿ ತಲ್ಲಣ ಸೃಷ್ಟಿಸಿದೆ.
“ಬಿಜೆಪಿ ಹೈಕಮಾಂಡ್ ನಾಯಕರು ನನ್ನೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ” ಎಂದು ಹೇಳುವ ಮೂಲಕ ತಮ್ಮ ಮರು-ಸೇರ್ಪಡೆಯ ಮುನ್ಸೂಚನೆಯನ್ನು ಯತ್ನಾಳ್ ನೀಡಿದ್ದಾರೆ.
ಹಿರಿಯ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕುರಿತು ಯತ್ನಾಳ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಪಕ್ಷದಿಂದ ಹೊರಗಿದ್ದರೂ, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಬೆಂಬಲಿಸುವುದಾಗಿ ಅವರು ಘೋಷಿಸಿದ್ದಾರೆ.



