ಹುಬ್ಬಳ್ಳಿಯಿಂದ ಪುಣೆಗೆ ಶುರುವಾಯಿತು ನೇರ ವಿಮಾನ ಸೇವೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಹುಬ್ಬಳ್ಳಿಯಿಂದ ಪುಣೆಗೆ (Pune) ಶೀಘ್ರವಾಗಿ ಸಂಪರ್ಕಿಸುವ ನಿಟ್ಟಿನಲ್ಲಿ (Hubballi) ನೇರ ವಿಮಾನ ಸೇವೆ (Flight Service) ಆರಂಭವಾಗಿದೆ.

ಪುಣೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಂಡಿಗೋ ವಿಮಾನಕ್ಕಿಂದು (IndiGo Flight) ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು.

 

ಮೊದಲ ದಿನವೇ ವಿಮಾನದ ಎಲ್ಲಾ ಸಿಟ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಈ ಸೇವೆಯಿಂದ ಹುಬ್ಬಳ್ಳಿ, ಧಾರವಾಡ ಅವಳಿ ನಗರ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ವ್ಯಾಪಾರದ ದೃಷ್ಟಿಯಿಂದ ಸಾಕಷ್ಟು ಅನುಕೂಲವಾಗಲಿದೆ.ರಾಜ್ಯದ ಪ್ರಸ್ತಾವನೆಗೆ ಸ್ಪಂದಿಸಿ ವಿಮಾನಯಾನ ಸೇವೆ ಆರಂಭಿಸಿರುವ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಸಂಸ್ಥೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಧನ್ಯವಾದ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!