ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಸಿಎಂ ಸ್ಟಾಲಿನ್‌ ಅವರು ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಪತ್ರ ಬರೆದಿದ್ದು, ಕರ್ನಾಟಕದಿಂದ ಕಾವೇರಿ ನೀರು (Cauvery Water) ಬಿಡುವಂತೆ ಮನವಿ ಮಾಡಿದ್ದಾರೆ.

ಜೂನ್, ಜುಲೈ ಅವಧಿಯಲ್ಲಿ ಕರ್ನಾಟಕ 40 ಟಿಎಂಸಿ ನೀರನ್ನು ಹರಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಕೇವಲ 11 ಟಿಎಂಸಿ ನೀರು ಮಾತ್ರ ಹರಿಸಿದೆ. ಕುರುವೈ ಭತ್ತ ಉಳಿಸಿಕೊಳ್ಳಲು ನೀರಿನ ಅಗತ್ಯವಿದೆ. ಕರ್ನಾಟಕದ (Karnataka) ಬಳಿ ನೀರಿದ್ದರೂ ರಾಜ್ಯಕ್ಕೆ ನೀರು ಬಿಡದೇ ಬಾಕಿ ಉಳಸಿಕೊಂಡಿದೆ ಎಂದು ಉಲ್ಲೇಖಿಸಿದ್ದಾರೆ.ಈಗಾಗಲೇ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೂ ಮನವಿ ಮಾಡಲಾಗಿದೆ. ನೀವೂ ನಿರ್ದೇಶನ ನೀಡುವಂತೆ ಕೋರಿ ಸ್ಟಾಲಿನ್‌ ಮನವಿ ಮಾಡಿದ್ದಾರೆ.

ನ್ಯಾ. ಎನ್.ಪಿ.ಸಿಂಗ್, ನ್ಯಾ.ಸುಧೀರ್ ನಾರಿಯನ್, ನ್ಯಾ.ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು (ನ್ಯಾಯಾಲಯಗಳು ವಿಚಾರಣೆ ನಡೆಸಿ ತೀರ್ಪು ನೀಡುತ್ತವೆ. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10, ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ಟಿಎಂಸಿ ನೀರನ್ನು ಹಂಚಲಾಯಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿತು.

ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ಜೂನ್ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಸೇರಿ ಒಟ್ಟು 192 ಟಿಎಂಸಿ ನೀರನ್ನು ಕನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!