ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಅಧಿವೇಶನದಲ್ಲಿಂದು (Loksabha Session 2023) ಕರ್ನಾಟಕದಲ್ಲಿ ಎದುರಾಗಿರುವ ಬರಪರಿಸ್ಥಿತಿ (drought) ಬಗ್ಗೆ ಮಂಡ್ಯ ಪಕ್ಷೇತರ ಸಂಸದ ಸುಮಲತಾ ಅಂಬರೀಶ್ (Sumalatha Ambareesh) ಅವರು ಪ್ರಸ್ತಾಪಿಸಿದ್ದಾರೆ.
ಶೂನ್ಯವೇಳೆಯಲ್ಲಿ ಮಾತನಾಡಿದ ಸುಮಲತಾ, 2023ರಲ್ಲಿ ಇಂದೆಂದೂ ಕಾಣದ ಉಷ್ಣತೆ ಹೆಚ್ಚಾಗಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಮಾನ್ಸೂನ್ ಕ್ಷೀಣಿಸಿದೆ. ಇದರ ಪರಿಣಾಮ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿವೆ. ಅಂದಾಜು 30 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ಹೀಗಾಗಿ ಕರ್ನಾಟಕದ ರೈತರಿಗೆ ನೆರವಾಗಬೇಕು ಎಂದು ಪ್ರಧಾನಿ ನರೇಂದ್ರ ಅವರಿಗೆ ಮನವಿ ಮಾಡಿದರು.
ಮಂಡ್ಯದ ಎಲ್ಲಾ ತಾಲೂಕುಗಳನ್ನು ಬರ ಪೀಡಿತವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. 60ರಿಂದ 70 ಪರ್ಸೆಂಟ್ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟದ ರೈತರ ನೆರವಿಗೆ ಧಾವಿಸಬೇಕು. ಅಲ್ಲದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.