ನಿರ್ದೇಶಕ ರಾಮ್​ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ! ಜಾಮೀನಿನ ಮಾತೇ ಇಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಟಾಲಿವುಡ್​ನ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್​ ಕೇಸ್​ನಲ್ಲಿ ಅವರಿಗೆ ಮುಂಬೈನ ಸ್ಥಳೀಯ ಕೋರ್ಟ್ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಮಂಗಳವಾರ (ಜವನವರಿ 21) ತೀರ್ಪು ಇದ್ದಿದ್ದರಿಂದ ರಾಮ್ ಗೋಪಾಲ್ ವರ್ಮಾ ಕೋರ್ಟ್​ಗೆ ಹಾಜರಿ ಹಾಕಬೇಕಿತ್ತು. ಆದರೆ, ರಾಮ್ ಗೋಪಾಲ್ ವರ್ಮಾ ಕೋರ್ಟ್​ಗೆ ಬರಲೇ ಇಲ್ಲ. ಹೀಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.

ರಾಮ್ ಗೋಪಾಲ್ ವರ್ಮಾ ಅವರು ಟಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ವಿವಾದಕ್ಕೂ ಅವರಿಗೂ ಸಾಕಷ್ಟು ನಂಟಿದೆ. ಅವರು ಒಂದಲ್ಲಾ ಒಂದು ವಿವಾದಗಳ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರಿಗೆ ಜೈಲು ಶಿಕ್ಷೆ ಆಗಿರುವುದು ಸಂಚಲನ ಸೃಷ್ಟಿಸಿದೆ.

ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ರೂ.3.72 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಪರಿಹಾರವನ್ನು ಪಾವತಿಸಲು ವಿಫಲವಾದಲ್ಲಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!