ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ದೇಶಕ ಸನೋಜ್ ಮಿಶ್ರಾ ಕೆಟ್ಟ ವ್ಯಕ್ತಿ, ಸಿನಿಮಾ ಶೂಟಿಂಗ್ ವೇಳೆ ನನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ನಟಿ ಮೊನಾಲಿಸಾ ಗಂಭೀರ ಆರೋಪ ಮಾಡಿದ್ದಾರೆ.
ಕುಂಭಮೇಳದಿಂದ ಫೇಮಸ್ ಆಗಿ ಹೀರೋಯಿನ್ ಆಗಿರುವ ಮೊನಾಲಿಸಾ ತನ್ನ ಸಿನಿಮಾ ದಿ ಡೈರಿ ಆಫ್ ಮಣಿಪುರದ ಬಗ್ಗೆ ಮಾತನಾಡಿದ್ದಾರೆ.
ನಮ್ಮ ಮದುವೆ ಬಗ್ಗೆ ನೂರಾರು ಮಂದಿಗೆ ಸಮಸ್ಯೆ ಇದೆ. ಆದರೆ ಇದು ನನ್ನ ವೈಯಕ್ತಿಕ ವಿಚಾರ. ನಮ್ಮಲ್ಲಿ ಯಾರೂ ಧರ್ಮ ಬದಲಾವಣೆ ಮಾಡಿಕೊಂಡಿಲ್ಲ. ಸನೋಜ್ ಮಿಶ್ರಾ ಸಿನಿಮಾ ಹೆಸರಿನಲ್ಲಿ ಅಪ್ರಾಪ್ತ ವಯಸ್ಕ ಹುಡುಗಿಯರ ಜೊತೆ ಅನುಚಿತವಾಗಿ ವರ್ತನೆ ಮಾಡುತ್ತಾರೆ. ನನ್ನ ಮದುವೆಯನ್ನು ಲವ್ ಜಿಹಾದ್ ಎಂದು ಕರೆದಿದ್ದಾರೆ. ನನಗೆ ಹಾಗೂ ನನ್ನ ಪತಿ ಫರ್ಮಾನ್ ಖಾನ್ಗೆ ಜೀವ ಬೆದರಿಕೆ ಇದೆ ಎಂದು ಹೇಳಿದ್ದಾರೆ.
ಶೂಟಿಂಗ್ ಸಮಯದಲ್ಲಿ ಸನೋಜ್ ಮಿಶ್ರಾ ಹಲವಾರು ಬಾರಿ ಅವರ ದೇಹದ ಭಾಗಗಳನ್ನು ಸ್ಪರ್ಶಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದರು. ಮನೆಯಲ್ಲಿ ಆ ಕಹಿ ಅನುಭವದ ಬಗ್ಗೆ ನಾನು ಅವರಿಗೆ ಹೇಳಿದಾಗ ಬೆಂಬಲ ಸಿಗಲಿಲ್ಲ. ಅದು ನನ್ನ ಮೊದಲ ಚಿತ್ರ ಮತ್ತು ನಾನು ಹೊಂದಿಕೊಳ್ಳಬೇಕಾಯಿತು. ನಾನು ಯಾರಿಗೂ ಹೇಳಲು ಸಾಧ್ಯವಾಗಲಿಲ್ಲ ಮತ್ತು ಆದ್ದರಿಂದ ನಾನು ಮೌನವಾಗಿದ್ದೆ ಎಂದು ಅವರು ಹೇಳಿದರು



