ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ.
ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದಲ್ಲಿ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದ ಜಾಮೀನು ಅರ್ಜಿಯನ್ನು ಸಹ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ನಲ್ಲಿ ಕಸರತ್ತು ನಡೆಸಿದ್ದರು. ಆದ್ರೆ, ಹೈಕೋರ್ಟ್ ನಾಲ್ಕು ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕೃತ ಮಾಡಿದೆ. ಹೀಗಾಗಿ ಪ್ರಜ್ವಲ್ಗೆ ನಿರಾಸೆಯಾಗಿದೆ.