ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಪಾಕಿಸ್ತಾನ ಪಂದ್ಯ ಮಳೆಯಿಂದ ರದ್ದಾಗಿದೆ. ಹೈವೋಲ್ಟೇಜ್ ಏಷ್ಯಾಕಪ್ ಪಂದ್ಯಕ್ಕೆ ಕಾತುರದಿಂದ ಕಾದು ಕುಳಿತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.
ಭಾರತ ನೀಡಿದ 267 ರನ್ ಟಾರ್ಗೆಟ್ ಚೇಸ್ ಮಾಡಲು ಪಾಕ್ ಸಜ್ಜಾಗಿತ್ತು, ಆದ್ರೆ ವರುಣ ಕರುಣೆ ತೋರದ ಕಾರಣ ಪಂದ್ಯ ರದ್ದಾಗಿದೆ.
ಹಲವು ಹೊತ್ತು ಕಾದ ಬಳಿಕ ಪಂದ್ಯವನ್ನು ರದ್ದುಗೊಳಿಸಲಾಯಿತು. ಭಾರತ ಹಾಗೂ ಪಾಕಿಸ್ತಾನ ತಲಾ ಒಂದೊಂದು ಅಂಕ ಹಂಚಿಕೊಂಡಿತು.