ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.
ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಕೈಗೊತ್ತಿಕೊಂಡ 57ನೇ ಸಿಸಿಹೆಚ್ ಕೋರ್ಟ್, ಇಂದಿಗೆ ಅರ್ಜಿ ವಿಚಾರಣೆ ಮುಂದೂಡಿತ್ತು.
ಇಂದು ನಡೆದ ಅರ್ಜಿ ವಿಚಾರಣೆ ವೇಳೆ ಪವಿತ್ರಾ ಗೌಡ ಜಾಮೀನಿಗೆ ಎಸ್ ಪಿಪಿ ಆಕ್ಷೇಪಣೆ ಸಲ್ಲಿಸಿದ್ದು, ಯಾವ ಕಾರಣಕ್ಕೂ ಪವಿತ್ರಾ ಗೌಡಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದಿದ್ದಾರೆ. ಜಾಮೀನಿಗೆ ಆಕ್ಷೇಪಣೆ ಹಿನ್ನೆಲೆಯಲ್ಲಿ ನ್ಯಾಯಾಧೀಶ ಜೈಶಂಕರ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದ್ದಾರೆ.