ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಓವರ್ ಟೇಕ್ ಮಾಡುವಾಗ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚೆಂಗಲ್ಪಟಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಓವರ್‌ಟೇಕ್ ಮಾಡುವ ಭರದಲ್ಲಿ ಬಸ್ ಹಿಂಬದಿಯಿಂದ ಬಂದು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್‌ನ ಹಿಂದೆಯೇ ಬರುತ್ತಿದ್ದ ಇನ್ನೊಂದು ಬಸ್ ಕೂಡ ಬಸ್‌ನ ಹಿಂಬದಿಗೆ ಢಿಕ್ಕಿ ಹೊಡೆದಿದ್ದು, ಅದನ್ನು ನಿಯಂತ್ರಿಸಲು ಸಾಧ್ಯವಾಗದೆ ಅಪಘಾತಕ್ಕೀಡಾಗಿದೆ.