February 15, 2026
Sunday, February 15, 2026
spot_img

ಶಿವರಾತ್ರಿ ದಿನವೇ ಅನಾಹುತ: ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

ಹೊಸದಿಗಂತ ವರದಿ ಗದಗ:

ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಕ್ತರು ಶಿವ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದಾರೆ. ಶಿವರಾತ್ರಿ ದಿನವೇ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ್ದಾರೆ.

ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ರಾತ್ರಿ ಬೆಳಗಾಗುವಷ್ಟರಲ್ಲಿ ಗ್ರಾಮದ ಹೊರವಲಯದಲ್ಲಿರುವ ಶ್ರೀರಾಮಲಿಂಗೇಶ್ವರ ಹಾಗೂ ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದಾರೆ.

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಭಾನುವಾರ ಭಕ್ತರು ಶಿವಲಿಂಗ, ನಂದಿ ವಿಗ್ರಹಕ್ಕೆ ಪೂಜೆಗೆಂದು ದೇವಸ್ಥಾನಕ್ಕೆ ಬಂದಿದ್ದ ವೇಳೆ ದೇವರ ವಿಗ್ರಹ, ಶಿವಲಿಂಗ ಭಗ್ನಗೊಂಡಿರುವುದು ಕಂಡು ಬಂದಿದೆ.

ಇದನ್ನೂ ಓದಿ:

ಶಿವರಾತ್ರಿ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಗ್ರಾಮಸ್ಥರು ದೇವಸ್ಥಾನದಲ್ಲಿ ಸುಣ್ಣ, ಬಣ್ಣ ಹಚ್ಚಿ ದೇವಾಲಯವನ್ನು ಅಲಂಕರಿಸಿ ಹೋಗಿದ್ದು. ಬೆಳಿಗ್ಗೆ ಪೂಜೆಗೆಂದು ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ರಾಮಲಿಂಗೇಶ್ವರ ಲಿಂಗದ ಪಾಣಿಬಟ್ಟಲು, ಎದುರಿನ ನಂದಿ ವಿಗ್ರಹದ ಮುಖ ಹಾಗೂ ದೇವಸ್ಥಾನದ ಹಿಂಭಾಗದಲ್ಲಿರುವ ಹೊನ್ನೆತ್ತಮ್ಮ ದೇವಿ ವಿಗ್ರಹವನ್ನೂ ವಿರೂಪಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮೊದಲು ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !