Sunday, August 14, 2022

Latest Posts

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ನಾಮಪತ್ರ ಸಲ್ಲಿಕೆ ಮಾಡಿ ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ನಾಲ್ಕೈದು ಜನರು ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಮಮತಾ ಆರೋಪ ಮಾಡಿದ್ದರು.
ಇದರಿಂದ ಜತೆಗೆ ಅವರ ಕಾಲು ಹಾಗೂ ಕುತ್ತಿಗೆ ಭಾಗಕ್ಕೆ ನೋವಾಗಿತ್ತು. ಹೀಗಾಗಿ ಕೋಲ್ಕತ್ತಾದ ಎಸ್​ಎಸ್​ಕೆಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಇದೀಗ ಚೇತರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಮನೆಗೆ ತೆರಳಲಿದ್ದು, ಮುಂದಿನ ವಾರ ಮತ್ತೊಮ್ಮೆ ತಪಾಸಣೆಗಾಗಿ ಆಸ್ಪತ್ರೆಗೆ ಬರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss