ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಅವರು ಇಂದು ಚೆನ್ನೈನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಈ ಹಂತದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹೆಚ್ ಡಿಕೆ ಇದು ನನ್ನ ಪುನರ್ಜನ್ಮ ಎಂದರು. ದೇಶಾದ್ಯಂತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದರು. ಅಭಿಮಾನಿಗಳು ಮತ್ತು ಹಿತೈಷಿಗಳ ಪ್ರಾರ್ಥನೆ ಫಲ ನೀಡಿದೆ. ಇನ್ನು ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯುವುದಾಗಿ ಹೇಳಿದ್ದಾರೆ.
ನನಗೆ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು. ಇದು ಮೂರನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ದೇಶಾದ್ಯಂತ ಅಭಿಮಾನಿಗಳು ಮತ್ತು ಹಿತೈಷಿಗಳು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ನಿಮ್ಮ ಪ್ರಾರ್ಥನೆಗೆ ಫಲ ಸಿಕ್ಕಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.