Tuesday, October 28, 2025

ಶಾಸಕ ಯತೀಂದ್ರ ವಿರುದ್ಧ ಶಿಸ್ತು ಕ್ರಮ?: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಿನ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂಬುದಾಗಿ ಶಾಸಕ ಯತೀಂದ್ರ ಹೇಳಿದ್ದು, ಈಡಿಗ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇದೀಗ ಈ ರೀತಿ ಹೇಳಿಕೆ ನೀಡಿದ ಯತೀಂದ್ರ ವಿರುದ್ಧ ಶಿಸ್ತು ಕ್ರಮದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ಈ ಕುರಿತು ಮಾಧ್ಯಮದವರು ಯತೀಂದ್ರ ಅವರ ಹೇಳಿಕೆ ಹಾಗೂ ಬೇರೆ ಶಾಸಕರ ವಿರುದ್ಧ ಕೈಗೊಳ್ಳುವ ಶಿಸ್ತು ಕ್ರಮ ಅವರ ವಿರುದ್ಧ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿದಾಗ, ಈ ಸಂದರ್ಭದಲ್ಲಿ ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೂಕ್ತ ಸಮಯದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

error: Content is protected !!