Tuesday, October 21, 2025

ಸಮೀಕ್ಷೆಗೆ ನೌಕರರು ಗೈರಾದರೆ ಶಿಸ್ತು ಕ್ರಮ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಕರ್ತವ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್‌ (HK Patil) ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದು ಅವರು ತಿಳಿಸಿದರು.

error: Content is protected !!