March 22, 2026
Sunday, March 22, 2026
spot_img

ದಾವಣಗೆರೆ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ: ಸಮರ್ಥ್ ವಿರುದ್ಧ ಬಂಡಾಯ ಎದ್ದ ಸಾದಿಕ್ ಪೈಲ್ವಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆಗಾಗಿ ಹೈಡ್ರಾಮಾವೇ ನಡೆದು ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ಇದರ ಬೆನ್ನಿಗೆ ಬಂಡಾಯದ ಬಾವುಟ ಹಾರಿದೆ.

ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಇತ್ತ ಅಲ್ಪಸಂಖ್ಯಾತ ಸಮುದಾಯದ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಸಾದಿಕ್ ಪೈಲ್ವಾನ್ ಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇದೀಗ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರ ಸಂಖ್ಯೆ ಅಧಿಕ ಇದ್ದ ಕಾರಣ, ಸಾದಿಕ್ ಪೈಲ್ವಾನ್ ಬಂಡಾಯ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ತಂದಿಟ್ಟಿದೆ .

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !