Wednesday, September 27, 2023

Latest Posts

ಶಿವಮೊಗ್ಗ ಪೊಲೀಸರಿಂದ ತಾರತಮ್ಯ: ಬಿಜೆಪಿ ಮುಖಂಡರ ಆಕ್ರೋಶ

ಹೊಸದಿಗಂತ ವರದಿ ಶಿವಮೊಗ್ಗ:

ಜಿಲ್ಲಾ ಪೊಲೀಸ್ ಇಲಾಖೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಬಿಜೆಪಿ ಮುಖಂಡರ ನಿಯೋಗ ಜಿಲ್ಲಾಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಕಾರಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಆಗಮಿಸಿದ್ದರು. ರಾಜ್ಯಪಾಲರ ಭಾಷಣದ ವೇಳೆ ಎನ್‌ಎಸ್‌ಯುಐ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿ‘ಟನೆ ನಡೆಸಿದ್ದರು. ಘಟಿಕೋತ್ಸವ ಸಭಾಂಗಣದ ಒಳಗೇ ಪ್ರತಿ‘ಟನೆ ಮಾಡಿದ್ದರು. ಈ ಬಗ್ಗೆ ಪೊಲೀಸರು ಯಾವುದೇ ಪ್ರಕರಣ ದಾಖಲು ಮಾಡಿರಲಿಲ್ಲ.

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದರು. ಪಠ್ಯದಲ್ಲಿ ಸಾವರ್ಕರ್ ಪಠ್ಯವನ್ನು ಕಿತ್ತು ಬಿಸಾಕಿದ್ದೇವೆ ಎಂದು ಮಧು ಬಂಗಾರಪ್ಪ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಆವರಣಕ್ಕೆ ಬಂದು ಕ್ಕಾರ ಕೂಗಿದ್ದರು.

ಸ್ವಯಂ ದೂರು ದಾಖಲಿಸಿದ ಪೊಲೀಸ್…!
ಅಂದು ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ದು ಬಿಡುಗಡೆ ಮಾಡಲು ಸಾಕಷ್ಟು ಹೊತ್ತು ಪೊಲೀಸರು ಸತಾಯಿಸಿದ್ದರು. ಕೊನೆಗೆ ಶಾಸಕರಾದ ಚನ್ನಬಸಪ್ಪ ಹಾಗೂ ಡಿ.ಎಸ್.ಅರುಣ್ ಠಾಣೆಗೆ ಭೇಟಿ ನೀಡಿದ ಬಳಿಕವೂ ಕೆಲ ಗಂಟೆಗಳ ಬಳಿಕ ಬಿಡುಗಡೆ ಮಾಡಿದ್ದರು. ಇದಾದ ಬಳಿಕ ಜಯನಗರ ಪೊಲೀಸ್ ಠಾಣೆ ಪಿಎಸ್‌ಐ ನವೀನ್ ಬಿಜೆಪಿ ಕಾರ್ಯಕರ್ತರ ಮೇಲೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಿದ್ದರು. ಈ ಬಗ್ಗೆ ಸ್ವಯಂ ದೂರು ದಾಖಲಿಸಲಾಗಿದೆ.

ರಾಜ್ಯಪಾಲರ ಕಾರ್ಯಕ್ರಮ ವೇಳೆ ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ. ಬಿಜೆಪಿ ಕಾರ್ಯಕರ್ತ ಮೇಲೆ ಕ್ರಮ ಯಾಕೆ? ಅವರ ಮೇಲೂ ಕೇಸ್ ಹಾಕಿ ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಮಾಜಿ ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಬಿ.ಭಾನುಪ್ರಕಾಶ್, ಆರ್.ಕೆ.ಸಿದ್ದರಾಮಣ್ಣ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಗಿರೀಶ್ ಪಟೇಲ್, ಎಸ್.ದತ್ತಾತ್ರಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!