March 11, 2026
Wednesday, March 11, 2026
spot_img

ಹುಬ್ಬಳ್ಳಿ-ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ಕೇಂದ್ರದಿಂದ ತಾರತಮ್ಯ: ಸಚಿವ ಎಂ.ಬಿ.ಪಾಟೀಲ್ ಆರೋಪ


ಹೊಸದಿಗಂತ ಡಿಜಿಟಲ್ ಡೆಸ್ಕ್:


ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ತಾರತಮ್ಯ ನೀತಿಗೆ ಇದು ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ರಾಜ್ಯದ ದೀರ್ಘಕಾಲದ ಬೇಡಿಕೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ದೂರಿದ್ದಾರೆ. ಹುಬ್ಬಳ್ಳಿ ಅಥವಾ ಬೆಳಗಾವಿಯಲ್ಲಿ ತಕ್ಷಣವೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಘೋಷಿಸಬೇಕು ಹಾಗೂ ರಾಜ್ಯದ ಸಂಸದರು ಒಟ್ಟಾಗಿ ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !