February 25, 2026
Wednesday, February 25, 2026
spot_img

ಮನೆ ಹಂಚಿಕೆಯಲ್ಲಿ ತಾರತಮ್ಯ: ಬಿಜೆಪಿ ಹು-ಧಾ ಮುಖಂಡರು, ಕಾರ್ಯಕರ್ತರಿಂದ ಪ್ರತಿಭಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ಕೊಳಗೇರಿ ಅಭಿವೃದ್ಧಿ ಮಂಡಳಿಯ ಹಾಗೂ ವಸತಿ ಇಲಾಖೆಯ ವತಿಯಿಂದ ಇಲ್ಲಿಯ ಮಂಟೂರ ರಸ್ತೆಯಲ್ಲಿ ಏರ್ಪಡಿಸಿದ್ದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಮಾಡದಿರುವುದು ಹಾಗೂ ಮನೆ ಹಂಚಿಕೆ ತಾರತಮ್ಯ ಮಾಡಿರುವುದನ್ನು ಖಂಡಿಸಿ ಬಿಜೆಪಿ ಹು-ಧಾ ಪೂರ್ವ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ದುರ್ಗದ ಬೈಲ್ ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹಮ್ಮದ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಅಭಿವೃದ್ಧಿಯನ್ನು ತಮ್ಮ ಪಕ್ಷದ ಅಭಿವೃದ್ಧಿ ಎಂದು ಬಿಂಬಿಸುತ್ತಿದ್ದಾರೆ. ಈ ಯೋಜನರಗೆ ಕೇಂದ್ರ ಸರ್ಕಾರದಿಂದ ಅನುದಾನ ತರಲು ಶ್ರಮಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ.ಅಲ್ಪಸಂಖ್ಯಾತರಿಗೆ ಹೆಚ್ಚು ಮನೆ ವಿತರಿಸಿ ಹಿಂದು ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್, ತಿಪ್ಪಣ್ಣ ಮಜ್ಜಗಿ, ಲಿಂಗರಾಜ ಪಾಟೀಲ, ಮಂಜುನಾಥ ಕಾಟಕರ, ನಿಂಗಪ್ಪ ಸುತ್ತಗಟ್ಟಿ, ರಾಜಣ್ಣ ಕೊರವಿ, ರೂಪಾ ಶೆಟ್ಟಿ, ರಂಗಾ ಬದ್ದಿ, ಅನೂಪ ಬಿಜವಾಡ ಸೇರಿದಂತೆ ಮುಂತಾದವರು ಇದ್ದರು.

ಈ ವೇಳೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಸೇರಿದಂತೆ 30 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು. ಈ ವೇಳೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹಮ್ಮದ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಅವರ ವಿರುದ್ಧ ಘೋಷಣೆ ಕೂಗಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !