March 19, 2026
Thursday, March 19, 2026
spot_img

‘SC, SP, TSP’ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಚಿವ ಸಂಪುಟ ಸಭೆಯಲ್ಲಿ ಸಿಡಿದೆದ್ದ ಸಚಿವ ಮಹದೇವಪ್ಪ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವ ಸಂಪುಟ ಸಭೆಯಲ್ಲಿ SCSP, TSP ಹಣ ನೀಡದ ವಿಚಾರವಾಗಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಸಿಡಿದೆದ್ದಿದ್ದು, ಎಸ್​ಸಿಎಸ್​ಪಿ, ಟಿಎಸ್​ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ? ಏನು ಅಂದುಕೊಂಡಿದ್ದೀರಿ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ?ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿಯೇ ಪ್ರಶ್ನಿಸಿದರು.

ಸಚಿವ ಸಂಪುಟ ಸಭೆ ವೇಳೆ ನೇರವಾಗಿ ಸಿಎಂಗೆ ಹೇಳದೆ ಸಂಪುಟ ಸಹೋದ್ಯೋಗಿಗಳ ಮೇಲೆ ಮಹದೇವಪ್ಪ ಅಸಮಾಧಾನ ಹೊರಹಾಕಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ SCSP, TSP ಅನುದಾನದ ಬಗ್ಗೆ ಚರ್ಚೆ ವೇಳೆ ಗಂಗಾಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಸಚಿವ ಕೆ.ಜೆ.ಜಾರ್ಜ್ ಮತ್ತು ಹೆಚ್.ಸಿ.ಮಹದೇವಪ್ಪ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ನಾನು ಎದ್ದು ಹೊರಟೇ ಬಿಡುತ್ತೇನೆಂದು ಸಚಿವ ಮಹದೇವಪ್ಪ ಕೂಗಾಡಿದ್ದಾರೆ. ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆದ ಪ್ರಸಂಗ ನಡೆದಿದೆ.

ಎಸ್​ಸಿಎಸ್​ಪಿ ಹಾಗೂ ಟಿಎಸ್​ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ರಾಜ್ಯ ಸರಕಾರ ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಈ ಹಿಂದಿನಿಂದಲೂ ವಿಪಕ್ಷಗಳು ಮಾಡುತ್ತಲೇ ಬಂದಿದ್ದವು. ಹಣವನ್ನ ಬೆರೆ ಯೋಜನೆಗಳಿಗೆ ಬಳಸಿದ ಪರಿಣಾಮ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಆಡ್ಡಿಯಾಗಿದೆ ಎಂದು ಪರಿಷತ್ ಸದಸ್ಯರಾದ ಹೇಮಲತಾ ನಾಯಕ್ ಹಾಗೂ ಶರವಣ ಆರೋಪಿಸಿದ್ದರು. ಆದರೆ, ಆರೋಪ ನಿರಾಕರಿಸಿದ್ದ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಗ್ಯಾರಂಟಿ ಯೋಜನೆಗಳಿಗೆ ಈ ಹಣವನ್ನು ಬಳಸಿಲ್ಲ. ಎಸ್​ಸಿ ಎಸ್​ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲು ಆಗುವುದಿಲ್ಲ. ಮೀಸಲಿಟ್ಟ ಹಣವನ್ನು ಆ ಸಮುದಾಯದ ಜನರಿಗೆ ಮಾತ್ರ ಬಳಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು.

ಆದ್ರೆ ಇಂದು ಆ ಹಣದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗರಂ ಆಗಿದ್ದಾರೆ. ಏನು ಅಂದುಕೊಂಡಿದ್ದೀರಿ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿರೋದು ಭಾರೀ ಕುತೂಹಲ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !