ಹೊಸದಿಗಂತ ಡಿಜಿಟಲ್ ಡೆಸ್ಕ್:
ವರದಿ ಬಂದ ನಂತರ ಚರ್ಚೆ ಮಾಡಿ ಏಳನೇ ವೇತನ ಆಯೋಗ ಜಾರಿ ಹಾಗೂ ಹಳೆ ಪಿಂಚಣಿ ಯೋಜನೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಮಾತನಾಡಿ, ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಆರನೇ ವೇತನ ಆಯೋಗ ಜಾರಿಯಾಗಿತ್ತು. ಇದೀಗ ಮತ್ತೆ ನನ್ನ ಅವಧಿಯಲ್ಲೇ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ವರದಿ ಸಿಗಲಿದೆ. ಅದನ್ನು ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ. ನಾನು ಸರ್ಕಾರ ನೌಕರರ ಪರವಾಗಿದ್ದೇನೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದಿದ್ದಾರೆ.