ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ನಿನ್ನೆ ತೆರಳಬೇಕಿತ್ತು. ಆದರೆ, ಬಕ್ರೀದ್ ಹಬ್ಬ ಇದ್ದರಿಂದ ಹೋಗಲು ಸಾಧ್ಯವಾಗಿಲ್ಲ. ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಧೈರ್ಯ ಹೇಳಿ ಬರುತ್ತೇನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣಗೆ ನೋಟಿಸ್ ನೀಡಿರುವ ಬಗ್ಗೆ, ಸಿನಿಮಾ ನಟರು ಆಗಿರೋದ್ರಿಂದ ಕಲಾವಿದರು ಸಂಪರ್ಕದಲ್ಲಿರುವುದು ಸಹಜ. ಸಾಕ್ಷ್ಯಾಧಾರಗಳ ಮೇಲೆ ತನಿಖೆ ಮುಂದುವರೆಯುತ್ತದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ತನಿಖೆ ಮಾಡಲಾಗುವುದು ಎಂದರು.