ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಹತ್ತು ದಿನಗಳ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಅಂತಿಮವಾಗಿ ಕ್ಯಾಬಿನೇಟ್ ಎಷ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸುತ್ತದೆಯೋ ಅಷ್ಟು ದಿನ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಅಧಿವೇಶನದ ದಿನಾಂಕದ ಬಗ್ಗೆ ಈಗಾಗಲೇ ಚರ್ಚೆಯಾಗಿದೆ. ಯಾವುದೇ ರೀತಿ ಗೊಂದಲ ಇಲ್ಲದಂತೆ ಅಧಿವೇಶನ ನಡೆಸಲಾಗುವುದು ಎಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಈ ಬಾರಿ ಅಧಿವೇಶನ ಎಷ್ಟು ದಿನ ನಡೆಯುತ್ತದೆ ಎನ್ನುವುದನ್ನೂ ಸಂಪುಟದಲ್ಲಿ ನಿರ್ಧರಿಸಲಾಗುವುದು ಎಂದಿದ್ದಾರೆ.