ಶೇ.50 ರಷ್ಟು ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ. ಎರಡು ಹಂತದಲ್ಲಿ ಚರ್ಚೆ ನಡೆಯಲಿದ್ದು, ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಯಾವಾಗ ಪ್ರಕಟಿಸಲಿದೆ ಎಂಬುದು ತಿಳಿದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದ್ದಾರೆ.

ದೆಹಲಿಯಲ್ಲಿ (New Delhi) ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಭೆಗೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಇಂದು ಬಸವ ಕಲ್ಯಾಣದಲ್ಲಿ ದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲಾ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದನ್ನು ಮುಂದೂಡಲು ಸಾಧ್ಯವಿಲ್ಲ. ಇದು ಅದ್ಯತೆಯ ಕಾರ್ಯಕ್ರಮವಾದ್ದರಿಂದ ಸಿಎಂ ಅಲ್ಲಿ ಭಾಗವಹಿಸುತ್ತಿದ್ದಾರೆ. ನಾವು ಸೇರಿ ಈಗಾಗಲೇ ಚರ್ಚೆ ಮಾಡಿರುವುದನ್ನು ನಾನು ಈ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ರಾಜ್ಯದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಆಗುವುದಿಲ್ಲ. ಒಂದೆರಡು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ (BJP) ಅಭ್ಯರ್ಥಿಗಳ ಪಟ್ಟಿ ನೋಡಿಕೊಂಡು ಅಭ್ಯರ್ಥಿಗಳ ಆಯ್ಕೆ ಮಾಡುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, ಅವರ ರಾಜಕಾರಣಕ್ಕೂ ನಮ್ಮ ರಾಜಕಾರಣಕ್ಕೂ ಬಹಳ ವ್ಯತ್ಯಾಸವಿದೆ. ನಮ್ಮ ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಮೇಲೆ ರಾಜಕಾರಣ ನಡೆಯುವುದಿಲ್ಲ. ಪಕ್ಷ, ನಮ್ಮ ಗ್ಯಾರಂಟಿ ಯೋಜನೆಗಳ ಮೇಲೆ ನಾವು ರಾಜಕೀಯ ಮಾಡುತ್ತೇವೆ. ಅವರು ಅವರದೇ ಆದ ಲೆಕ್ಕಾಚಾರ ಇಟ್ಟುಕೊಂಡಿದ್ದರೆ, ನಾವು ನಮ್ಮದೇ ಲೆಕ್ಕಾಚಾರ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!