ಸುರತ್ಕಲ್ ಟೋಲ್ ವಿಲೀನದ ಕುರಿತಾಗಿ ನಳಿನ್ ಕುಮಾರ್ ಕಟೀಲ್ ನೇತೃತ್ವದ ಸಭೆಯಲ್ಲಿ ಚರ್ಚೆ

ಹೊಸದಿಗಂತ ವರದಿ, ಮಂಗಳೂರು:
ಮುಂದಿನ ಒಂದು ತಿಂಗಳ ಒಳಗೆ ಸುರತ್ಕಲ್ ಟೋಲ್ ವಿಲೀನ ಪ್ರಕ್ರಿಯೆ ಮುಗಿಯಲಿದೆ ಎಂದು ಎನ್ ಎಚ್ ಐ ಅಧಿಕಾರಿ ಲಿಂಗೇಗೌಡ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಮಂಗಳವಾರ ದ.ಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ಮಾಡಲಾಗಿದ್ದು, ಸುರತ್ಕಲ್ ಟೋಲ್ ಗೇಟ್ ವಿಲೀನದ ಬಗ್ಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎಂದರು.
ಸುರತ್ಕಲ್ ಟೋಲ್ ಗೇಟ್ ಬಗ್ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಸುರತ್ಕಲ್ ಟೋಲನ್ನು ಹೆಜಮಾಡಿ ಹಾಗೂ ತಲಪಾಡಿ ಜತೆ ಒಂದು ತಿಂಗಳೊಳಗೆ ವಿಲೀನಕ್ಕೆ ನಿರ್ಧರಿಸಲಾಗಿದೆ ಎಂದು ಎನ್ ಎಚ್ ಐ ಅಧಿಕಾರಿ ಮಾಹಿತಿ ನೀಡಿದರು.
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು‌ ಮಟ್ಟದ ಅಧಿಕಾರಿಗಳು, ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!