ಸಾರಿಗೆ ನೌಕರರ ಬೇಡಿಕೆ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವ ಶ್ರೀರಾಮುಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾರಿಗೆ ನೌಕರರ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಸಾರಿಗೆ ಸಚಿವ ವಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಮಾರ್ಚ್ 24ರಂದು ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ಸಾರಿಗೆ ನೌಕರರು ನಿರ್ಧಾರ ಮಾಡಿದ ಬೆನ್ನಲ್ಲೇ ಸಚಿವ ಶ್ರೀರಾಮುಲು ಮಾತನಾಡಿದ್ದಾರೆ.

ಎರಡು ದಿನ ಸಮಯ ನೀಡಿ, ಸಿಎಂ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ, ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದು ನೌಕರರಿಗೆ ಆಶ್ವಾಸನೆ ನೀಡಿದ್ದಾರೆ.

ಸರ್ಕಾರಿ ನೌಕರರ ವೇತನಕ್ಕೆ ಸಮನಾದ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಿ ನೌಕರರು ಪಟ್ಟು ಹಿಡಿದು ಕುಳಿತಿದ್ದಾರೆ. ಈ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!