ಪ್ರಧಾನಿ ಜೊತೆ ಪರೀಕ್ಷಾ ಪರ್ ಚರ್ಚಾ: 31 ಲಕ್ಷ ವಿದ್ಯಾರ್ಥಿಗಳು, 5 ಲಕ್ಷ ಶಿಕ್ಷಕರು, 2 ಲಕ್ಷ ಪೋಷಕರಿಂದ ನೋಂದಣಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜ. 27 ರಂದು ನಡೆಯಲಿರುವ 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ನವದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಅಧಿಕ ಸಂಖ್ಯೆಯಲ್ಲಿ ನೋಂದಣಿಯಾಗಿವೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ರಾಜ್ಯ ಮಂಡಳಿಗಳು, CBSE, ಕೇಂದ್ರೀಯ ವಿದ್ಯಾಲಯ ಸಂಘಟನೆ, ನವೋದಯ ವಿದ್ಯಾಲಯ ಸಮಿತಿ ಮತ್ತು ಇತರ ಮಂಡಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು, 31 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, 5 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಮತ್ತು ಸುಮಾರು 2 ಲಕ್ಷ ಪೋಷಕರು ಪರೀಕ್ಷಾ ಪರ್ ಚರ್ಚಾಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

150 ದೇಶಗಳ ವಿದ್ಯಾರ್ಥಿಗಳು, 51 ದೇಶಗಳ ಶಿಕ್ಷಕರು ಮತ್ತು 50 ದೇಶಗಳ ಪೋಷಕರು ಸಹ ಕಾರ್ಯಕ್ರಮಕ್ಕೆ ನೋಂದಾಯಿಸಿಕೊಂಡಿದ್ದು, ಅವರಿಗೆ 2022 ರ ನವೆಂಬರ್ 25 ಮತ್ತು ಡಿಸೆಂಬರ್ 30 ರ ನಡುವೆ ವಿವಿಧ ವಿಷಯಗಳ ಕುರಿತು ಆನ್‌ಲೈನ್ ಸೃಜನಶೀಲ ಬರವಣಿಗೆ ಸ್ಪರ್ಧೆಯನ್ನು ನಡೆಸಲಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!