April 12, 2026
Sunday, April 12, 2026
spot_img

ವಿಶ್ವವಿದ್ಯಾಲಯಗಳ ಖಾಲಿ ಹುದ್ದೆ ಭರ್ತಿಗೆ ಕುಲಪತಿಗಳೊಂದಿಗೆ ಚರ್ಚಿಸಿ ಶೀಘ್ರವೇ ಕ್ರಮ: ಸಚಿವ ಡಾ. ಎಂ. ಸಿ. ಸುಧಾಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಒಂದು ಸಾವಿರ ಬೋದಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ವಿಧಾನಪರಿಷತ್ತಿನಲ್ಲಿಂದು ತಿಳಿಸಿದ್ದಾರೆ.

ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಖಾಲಿ ಇರುವ ಮೂರು ಸಾವಿರ ಹುದ್ದೆಗಳ ಪೈಕಿ ಒಂದು ಸಾವಿರ ಹುದ್ದೆ ಭರ್ತಿ ಮಾಡಲು ರಾಜ್ಯ ಮುಂಗಡಪತ್ರದಲ್ಲಿ ಮಂಜೂರಾತಿ ದೊರೆತಿದೆ. ಆಯಾ ವಿಶ್ವವಿದ್ಯಾಲಯಗಳಕುಲಪತಿ ಜೊತೆ ಚರ್ಚಿಸಿ, ಅಗತ್ಯವಿರುವ ಬೋಧಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿ 6 ಸಾವಿರದ 862 ಗ್ರಂಥಾಲಯಗಳನ್ನು ತೆರೆಯಲಾಗಿದ್ದು, ಪ್ರಸ್ತುತ ಸಾಲಿನಲ್ಲಿ 1 ಸಾವಿರದ 300 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ.


ಸದಸ್ಯ ರಾಮೋಜಿ ಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಂಥಾಲಯಗಳಲ್ಲಿ ಶುಚಿತ್ವ ಸೇರಿದಂತೆ ಇನ್ನಿತರ ಕೆಲಸಕ್ಕಾಗಿ 1 ಸಾವಿರದ 156 ಕೆಲಸಗಾರರು ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಗೆ 8 ಗಂಟೆಗಿಂತ ಕಡಿಮೆ ಅವಧಿಯಿದ್ದು, ಹೀಗಾಗಿ ಕನಿಷ್ಠ ವೇತನ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !