Friday, March 5, 2021

Latest Posts

ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅಪಮಾನ: ಹೋರಾಟದ ಎಚ್ಚರಿಕೆ ನೀಡಿದ ಸಮುದಾಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಪೊಗರು ಸಿನಿಮಾ ದೃಶ್ಯವೊಂದರಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಲಾಗಿದ್ದು, ಚಿತ್ರತಂಡ ಈ ದೃಶ್ಯವನ್ನು ಚಿತ್ರದಿಂದ ತೆಗೆದುಹಾಕಬೇಕು ಹಾಗೂ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ಫೆ.23ರಂದು ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡುತ್ತಿದ್ದು, ಫೆ.24ರಂದು ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಚ್ಚಿದಾನಂದಮೂರ್ತಿ ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss