ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ ಕ್ವೀನ್ ರಮ್ಯಾಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲ ಮೆಸೇಜ್ ಬರುತ್ತಿರುವ ಹಿನ್ನೆಲೆ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಲು ನಿರ್ಧರಿಸಿದೆ.
ಅಲ್ಲದೇ ನಟಿ ರಮ್ಯಾ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧ ದೂರು ಕೊಟ್ಟರೆ, 3 ರಿಂದ 7 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.
ಈ ಕುರಿತು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದಾರೆ. ರಮ್ಯಾ ಅಂತಲ್ಲ, ಬೇರೆ ಬೇರೆ ಕಡೆ ಏನಾದರೂ ಆದಾಗ ಈ ತರ ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ. ತುಂಬಾ ಜನ ಸೆಲೆಬ್ರಿಟಿಗಳು ನಮ್ಮಲ್ಲಿಗೆ ಬಂದು ದೂರು ಕೊಡುತ್ತಾರೆ. ಯಾರು ಅಶ್ಲೀಲ ಪದವನ್ನು ಬಳಕೆ ಮಾಡಬೇಡಿ. ಯಾವ ಮಹಿಳೆಗೂ ಕೂಡ ಅಗೌರವ ತೋರಬೇಡಿ. ನಿಮ್ಮ ಕೆಟ್ಟ ಪದಬಳಕೆಯಿಂದಾಗಿ ಮುಂದೊಂದು ದಿನ ಜೈಲಿಗೂ ಹೋಗಬಹುದು. ಕಾನೂನಿನ ಪ್ರಕಾರ ಇದು ದೊಡ್ಡ ಅಪರಾಧ. ಈ ರೀತಿ ಒಬ್ಬರನ್ನು ನೋಡಿ ಇನ್ನೊಬ್ಬರು ಮಾಡೋದು ಬೇಡ. ಇದು ಸರಿಯಲ್ಲ. ಒಂದು ವೇಳೆ ರಮ್ಯಾ ದೂರು ದಾಖಲು ಮಾಡಿದರೆ ಖಂಡಿತಾ ಎಫ್ಐಆರ್ ಆಗುತ್ತದೆ. ಬಳಿಕ ಮೂರರಿಂದ ಏಳು ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಯಿರುತ್ತದೆ ಎಂದು ಎಚ್ಚರಿಸಿದ್ದಾರೆ.