ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಇಂದು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ ನಡೆಸಲಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೌನ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದ್ದು, ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರು ಇರಲಿದ್ದಾರೆ.
ಇನ್ನು ಜೈನಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಾಗೂ ಮೈಸೂರಿನ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆಯನ್ನು ಖಂಡಿಸಿ ಸೂಕ್ತ ತನಿಖೆಗೆ ಆಗ್ರಹಿಸಿ ಇಂದು ಬಿಜೆಪಿ ಕೂಡ ಪ್ರತಿಭಟನೆ ನಡೆಸಲಿದೆ. ವಿಧಾನಸೌಧದ ಬಳಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.