ಹೊಸದಿಗಂತ ಡಿಜಿಟಲ್ ಡೆಸ್ಕ್
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಹಾಗು ಮುಖ್ಯಮಂತ್ರಿ ನಡುವಿನ ಗುದ್ದಾಟ ಮುಂದುವರಿದಿದ್ದು, ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ತೆಗೆದು ಹಾಕಿ, ಆ ಸ್ಥಾನಕ್ಕೆ ವಿಷಯ ತಜ್ಞರನ್ನು ನೇಮಿಸುವ ಕರಡು ಮಸೂದೆಗೆ ಬುಧವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದು ಹಾಕುವ ಕರಡು ಮಸೂದೆಗೆ ಒಪ್ಪಿಗೆ ನೀಡಲಾಯಿತು.
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇತ್ತೀಚಿಗಷ್ಟೇ ತಮ್ಮನ್ನು ಕುಲಾಧಿಪತಿ ಹುದ್ದೆಯಿಂದ ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಮಾಡದೆ ವಾಪಸ್ ಕಳುಹಿಸಿದ್ದರು.