ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಜಾರಿಗೆ ಬಂದಿರುವ ಹೊಸ ಕ್ರಿಮಿನಲ್ ಕಾನೂನು ಅಡಿಯಲ್ಲಿ ಶಿಕ್ಷೆಯಲ್ಲ ನ್ಯಾಯ ವಿತರಣೆ ಮಾಡಲಿದೆ. ಈ ಕಾನೂನು ಭಾರತದಲ್ಲಿ ಬ್ರಿಟಿಷ್ ಕಾನೂನುಗಳ ಯುಗವನ್ನು ಕೊನೆಗೊಳಿಸಿದೆ, ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ವದೇಶಿ ಆಗಿ ಪರಿವರ್ತಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಕ್ರಿಮಿನಲ್ ಕಾನೂನುಗಳು ಅನುಷ್ಠಾನ ಪೂರ್ಣಗೊಂಡ ನಂತರ, ಅತ್ಯಂತ ಆಧುನಿಕ ಕಾನೂನುಗಳಾಗಿ ನಿಲ್ಲುತ್ತವೆ ಎಂದರು. ಶಿಕ್ಷೆಯ ಬದಲಿಗೆ ನ್ಯಾಯ, ತ್ವರಿತ ವಿಚಾರಣೆ ಮತ್ತು ವಿಳಂಬದ ಜಾಗದಲ್ಲಿ ನ್ಯಾಯ ಒದಗಿಸಲಾಗುವುದು, ಮೊದಲು ಪೊಲೀಸರ ಹಕ್ಕುಗಳನ್ನು ಮಾತ್ರ ರಕ್ಷಿಸಲಾಗುತ್ತಿತ್ತು, ಆದರೆ ಈಗ ಸಂತ್ರಸ್ತರ ಮತ್ತು ದೂರುದಾರರ ಹಕ್ಕುಗಳನ್ನು ಸಹ ರಕ್ಷಿಸಲಾಗುವುದು ಎಂದು ಹೇಳಿದರು.
ಹೊಸ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ 22.5 ಲಕ್ಷಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲು 12,000 ಮಾಸ್ಟರ್ ಟ್ರೈನರ್‌ಗಳನ್ನು ನಿಯೋಜಿಸಲಾಗಿದೆ ಎಂದರು.