OTT ಪ್ಲಾಟ್‌ಫಾರ್ಮ್‌ಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಪ್ರದರ್ಶನ ಕಡ್ಡಾಯ: ಆರೋಗ್ಯ ಸಚಿವಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಥಿಯೇಟರ್‌ಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ಕಂಡುಬರುವಂತೆ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೂಡ ತಂಬಾಕು ವಿರೋಧಿ ಎಚ್ಚರಿಕೆಗಳನ್ನು ಪ್ರದರ್ಶಿಸುವುದು ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆಗಳಿಗಾಗಿ ಹೊಸ ನಿಯಮಗಳನ್ನು ರೂಪಿಸಿದೆ.

ಸಚಿವಾಲಯವು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ, 2004ರ ಅಡಿಯಲ್ಲಿ ತಿದ್ದುಪಡಿ ಮಾಡಲಾದ ನಿಯಮಗಳನ್ನು ಸೂಚಿಸಿದೆ. ಈ ತಿದ್ದುಪಡಿ ನಿಯಮಗಳ ಅನ್ವಯ ತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ, 2022 ರ ಅಡಿಯಲ್ಲಿ OTT ಪ್ಲಾಟ್‌ಫಾರ್ಮ್‌ಗಳು ತಂಬಾಕು ವಿರೋಧಿ ಎಚ್ಚರಿಕೆಗಳನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ.

ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಮತ್ತು ಹಾಟ್‌ಸ್ಟಾರ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಾರಂಭ ಮತ್ತು ಮಧ್ಯದಲ್ಲಿ ಕನಿಷ್ಠ 30 ಸೆಕೆಂಡುಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆಯನ್ನು ಕಡ್ಡಾಯವಾಗಿ ನೀಡಬೇಕಿರುತ್ತದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!