ವಾರದೊಳಗೆ ಸಿಎಂ ಶಿಂಧೆ ಸಹಿತ ಬಂಡಾಯ ಶಾಸಕರ ಅನರ್ಹತೆ ಅರ್ಜಿ ಇತ್ಯರ್ಥಪಡಿಸಿ: ‘ಮಹಾ’ ಸ್ಪೀಕರ್‌ಗೆ ಸುಪ್ರೀಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹಿತ ಶಿವಸೇನೆಯ ಬಂಡಾಯ ಶಾಸಕರ (Shiv Sen MLAs) ವಿರುದ್ಧದ ಅನರ್ಹತೆ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿದೆ.

ಈ ವೇಳೆ ವಾರದೊಳಗೇ ಅನರ್ಹತೆ ಅರ್ಜಿಗಳನ್ನು ಇತ್ಯರ್ಥಪಡಿಸಲು (disqualification pleas) ಟೈಮ್ ನಿಗದಿ ಮಾಡುವಂತೆ ಸ್ಪೀಕರ್ ರಾಹುಲ್ ನಾರ್ವೇಕರ್ (Speaker Rahul Narwekar) ಅವರಿಗೆ ಸೂಚಿಸಿದೆ.

ಶಿವಸೇನೆಯ ಬಂಡಾಯ ಶಾಸಕರ ಅನರ್ಹತೆ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ತೀರ್ಮಾನಿಸುವಂತೆ ಮೇ 11 ರ ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಗೌರವ ಸಲ್ಲಿಸುವಂತೆ ಮಹಾರಾಷ್ಟ್ರ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ಹೇಳಿದೆ.

ಬಂಡಾಯ ಶಾಸಕರ ವಿರುದ್ಧ ಅನರ್ಹ ಅರ್ಜಿಗಳ ವಿಚಾರಣೆಯಲ್ಲಿ ಏನೂ ಬೆಳವಣಿಗೆಯಾಗಿಲ್ಲ. ನೋಟಿಸ್ ಜಾರಿ ಮಾಡಿರುವುದನ್ನು ಬಿಟ್ಟರೆ ಬೇರೇನೂ ಆಗಿಲ್ಲ. ಹಾಗಾಗಿ, ಕಾರ್ಯವಿಧಾನದ ನಿರ್ದೇಶನಗಳನ್ನು ರವಾನಿಸಲು ಒಂದು ವಾರದೊಳಗೆ ವಿಷಯವನ್ನು ಇತ್ಯರ್ಥಪಡಿಸುವಂತೆ ಸ್ಪೀಕರ್‌ಗೆ ಸೂಚಿಸಿದೆ.

ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ”ಆದೇಶದ ಪ್ರತಿ ಇನ್ನೂ ಬಂದಿಲ್ಲ. ಅನರ್ಹತೆ ಅರ್ಜಿಗಳ ವಿಚಾರಣೆ ತನ್ನದೇ ಆದ ಕ್ರಮವನ್ನು ಅನುಸರಿಸುತ್ತದೆ. ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!