ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಧಿಸಲಾಗಿದ್ದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಇಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ ಸ್ಥಾನದ ಅನರ್ಹತೆಯನ್ನು ವಾಪಾಸ್ ಪಡೆದಿದ್ದಾರೆ.
ಈ ಮೂಲಕ ರಾಹುಲ್ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪನಡೆ ಮಾಡಲಾಗಿದೆ. ಈ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅಧಿಕಾರಿಗಳ ಜತೆ ಸಮಾಲೋಚಿಸಿ ನಿರ್ಣಯ ಕೈಗೊಂಡಿದ್ದಾರೆ.
ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬಳಿಕ ಜನಪ್ರತಿನಿಧಿ ಕಾಯ್ದೆಯಡಿ ಕಳೆದ ಮಾರ್ಚ್‌ನಲ್ಲಿ ರಾಗಾ ಅವರ ಲೋಕಸಭೆ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು.
ರಾಹುಲ್ ಗಾಂಧಿ ಐದು ವರ್ಷಗಳ ಹಿಂದೆ ಕೋಲಾರದ ಕಾರ್ಯಕ್ರಮವೊಂದರಲ್ಲಿ ಎಲ್ಲ ಕಳ್ಳರ ಸರ್‌ನೇಮ್ ಮೋದಿ ಎಂದು ಯಾಕೆ ಇರುತ್ತದೆ ಎಂದು ಟೀಕಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರಿಂದಾಗಿ ಎರಡು ವರ್ಷ ಜೈಲು ಹಾಗೂ ಲೋಕಸಭಾ ಸದಸ್ಯತ್ವದಿಂದ ರಾಗಾ ಅವರು ಅನರ್ಹಗೊಂಡಿದ್ದರು.