ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಶ್ರೇಯಸ್ ಪಟೇಲ್ ಅವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ದೇವರಾಜೇಗೌಡ ಆಗ್ರಹಿಸಿದ್ದಾರೆ.
ನೂತನ ಸಂಸದ ಶ್ರೇಯಸ್ ಪಟೇಲ್ ವಿರುದ್ಧ ಕೇಸ್ ಬಗ್ಗೆ ಸದಸ್ಯತ್ವ ಅನರ್ಹಗೊಳಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮಾತನಾಡಿದ ಅವರು, ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಅಶ್ಲೀಲ ಬಿಡುಗಡೆ ಮಾಡಿ ಅದರ ಲಾಭವನ್ನು ಶ್ರೇಯಸ್ ಪಟೇಲ್ ಪಡೆದುಕೊಂಡಿದ್ದಾರೆ. ಅವರ ತಪ್ಪು ಮಾಹಿತಿ ಬಗ್ಗೆ ಕೋರ್ಟ್ ಜೊತೆಗೆ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ. ಈ ಪ್ರಕರಣದಲ್ಲಿ ನನ್ನ ಮಗನಿಂದಲೇ ದೂರು ಕೊಡಿಸಿದ್ದೇನೆ. ಯಾವುದೇ ಆಮಿಷಕ್ಕೆ ಬಲಿಯಾಗಬಾರದು ಎಂದು ಹೀಗೆ ಮಾಡಿದ್ದೇನೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಶ್ರೇಯಸ್ ಸದಸ್ಯತ್ವ ಅನರ್ಹತೆ ಆಗಲಿದೆ ಎಂದು ಭವಿಷ್ಯ ನುಡಿದರು.
ಪ್ರಜ್ಚಲ್ ರೇವಣ್ಣ ಕೇಸ್‌ನಲ್ಲಿ ನಮಗೆ ಅನುಭವ ಇರಲಿಲ್ಲ. ಈಗ ನಾವು ಸೂಕ್ತ ರೀತಿಯಲ್ಲಿ ದಾಖಲೆ ನೀಡಿದ್ದೇವೆ. ಶ್ರೇಯಸ್ ಶೀಘ್ರವಾಗಿ ಅನರ್ಹತೆ ಆಗಲಿದ್ದಾರೆ. ಸೆಪ್ಟೆಂಬರ್‌ನಲ್ಲಿ ಖುದ್ದು ಹಾಜರಿಗೆ ಕೋರ್ಟ್ ಸೂಚನೆ ನೀಡಿದೆ. ಶ್ರೇಯಸ್ ಜನರ ಸಿಂಪತಿ ಗಳಿಸಲು ಬೆಲೆ ಬಾಳುವ ಆಸ್ತಿಗೆ ಕಡಿಮೆ ಮೌಲ್ಯ ಇರುವ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹೆಚ್ಚುವರಿಯಾಗಿ 21 ಲಕ್ಷ ರೂ. ಖರ್ಚು ಮಾಡಿರುವ ಬಗ್ಗೆ ದೂರು ನೀಡಲಾಗಿದೆ. ಅಂದಿನ ಚುನಾವಣಾ ಅಧಿಕಾರಿ ಜೊತೆ ಶಾಮೀಲಾಗಿ ಖರ್ಚು ವೆಚ್ಚವನ್ನು ಮುಚ್ಚಿಡಲಾಗಿದೆ ಎಂದು ಆರೋಪಿಸಿದ್ದಾರೆ.