ಹೊಸದಿಗಂತ ಡಿಜಿಟಲ್ ಡೆಸ್ಕ್:
ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಬೆಂಗಳೂರು ಜಲಮಂಡಳಿಯು ಸೆ.15ರಿಂದ ಮೂರು ದಿನ ನಗರದಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆಪ್ಟಂಬರ್ 15, 16 ಮತ್ತು ಸೆಪ್ಟಂಬರ್ 17ರಂದು ಸ್ಥಗಿತಗೊಳಿಸಲಾಗುತ್ತಿದೆ.
ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಇದರ ವ್ಯಾಪ್ತಿಯಿಂದ ಎಲ್ಲೆಲ್ಲಿ ನೀರು ಕಾವೇರಿ ನೀರು ಸರಬರಾಜು ಆಗುತ್ತಿದಿಯೋ ಅಲ್ಲೆಲ್ಲ ಕಡೆಗಳಲ್ಲಿ ವ್ಯತ್ಯಯ ಉಂಟಾಗಲಿದೆ.
ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಅವುಗಳ ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎನ್ನಲಾಗಿದೆ.