May 5, 2026
Tuesday, May 5, 2026
spot_img

ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರು ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. 15 ನಿಮಿಷಗಳಿಂದ ರೈಲುಗಳು ನಿಂತಲ್ಲೇ ನಿಂತಿದ್ದು, ಸಾವಿರಾರು ಪ್ರಯಾಣಿಕರು ಪರದಾಡಿದರು.

ವಿದ್ಯುತ್ ವ್ಯತ್ಯಯದಿಂದ ನೇರಳೆ ಮಾರ್ಗದ ಕುಂದಲಹಳ್ಳಿ ಸ್ಟೇಷನ್​ನಲ್ಲಿ ಮೆಟ್ರೋ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಇದರಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ಮೆಟ್ರೋ ರೈಲು ನಿಗಮ, ವಿದ್ಯುತ್ ಪೂರೈಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಶೀಘ್ರದಲ್ಲೇ ಸಮಸ್ಯೆಯನ್ನು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !