ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ 49 ವಿಪಕ್ಷ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ.
ನಿನ್ನೆಯಷ್ಟೇ ದಾಖಲೆಯ 79 ವಿಪಕ್ಷ ಸಂಸದರನ್ನು ಸಂಸತ್‌ನಿಂದ ಅಮಾನತುಗೊಳಿಸಲಾಗಿತ್ತು. ಇದೀಗ ಅಧಿವೇಶನದಲ್ಲಿ ಅಮಾನತುಗೊಂಡ ಒಟ್ಟು ಸದಸ್ಯರ ಸಂಖ್ಯೆ 141ಕ್ಕೆ ಏರಿಕೆ ಆಗಿದೆ.
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಕಾರ್ತಿ ಚಿದಂಬರಂ, ಎನ್‌ಸಿಪಿಯ ಸುಪ್ರಿಯಾ ಸುಳೆ ಸೇರಿದಂತೆ 49 ಎಂಪಿಗಳನ್ನು ಅಮಾನತು ಮಾಡಿದ್ದಾರೆ.