ದೀಪಿಕಾ ‘ಬೇಷರಂ’ ಹಾಡಿಗೆ ಅಸಮಾಧಾನ: ಪಠಾಣ್ ಚಿತ್ರ ನಿಷೇಧಿಸುವ ಎಚ್ಚರಿಕೆ ನೀಡಿದ ಮಧ್ಯಪ್ರದೇಶ ಗೃಹಸಚಿವ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಠಾಣ್ ಚಿತ್ರದ ‘ಬೇಷರಂ ರಂಗ್’ ಹಾಡಿಗೆ ದೇಶದೆಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಕೂಡ ದೀಪಿಕಾ ಪಡುಕೋಣೆ ಅವರ ನಟನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಠಾಣ್ ಚಿತ್ರದ ಮೊದಲ ಹಾಡು ‘ಬೇಷರಂ ರಂಗ್’ ಸೋಮವಾರ ಬಿಡುಗಡೆಗೊಂಡಿತ್ತು. ಈ ಹಾಡಿನಲ್ಲಿ ಶಾರುಖ್ ಖಾನ್ ಮತ್ತು ನಾಯಕಿ ದೀಪಿಕಾ ಪಡುಕೋಣೆ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಹಾಡಿಗೆ ವಿರೋಧ ವ್ಯಕ್ತಪಡಿಸಿದ ಮಧ್ಯ ಪ್ರದೇಶ ಗೃಹ ಸಚಿವ, ಮಧ್ಯ ಪ್ರದೇಶದಲ್ಲಿ ಪಠಾಣ್ ಚಿತ್ರಕ್ಕೆ ನಿಷೇಧ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

ಚಿತ್ರದಲ್ಲಿ ಕೆಲವು ಆಕ್ಷೇಪಾರ್ಹ ದೃಶ್ಯಗಳಿದ್ದು, ಅವುಗಳನ್ನು ಬದಲಾಯಿಸದಿದ್ದರೆ ಮಧ್ಯ ಪ್ರದೇಶದಲ್ಲಿ ಪಠಾಣ್ ಚಿತ್ರವನ್ನು ನಿಷೇಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇನ್ನು ಸಾಮಾಜಿಕ ಮಾಧ್ಯಮದಲ್ಲೂ ಸಿನಿಮಾ ಬಾಯ್ಕಾಟ್ ಗೆ ಹೆಚ್ಚಿನ ಕೂಗು ಕೇಳಿಬರುತ್ತಿದ್ದು, ಸಿನಿಮಾದ ವಿರುದ್ಧ ಜನರು ಸಿಟ್ಟಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!