ಕಾಂಗ್ರೆಸ್‌ನಲ್ಲಿ ಭಿನ್ನಮತ: ಮಾಜಿ ಪರಿಷತ್ ಸದಸ್ಯ ಪಾಟೀಲ್‌ಗೆ ಟಿಕೆಟ್ ನೀಡದಂತೆ ಖಗೆ೯ಗೆ ಪತ್ರ

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ದಕ್ಷಿಣ ಮತಕ್ಷೇತ್ರದ ಆಕಾಂಕ್ಷಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಂಪ್ರಭು ಪಾಟೀಲ್ ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖಗೆ೯ಗೆ ಅದೇ ಪಕ್ಷದವರು ಪತ್ರ ಬರೆದಿದ್ದಾರೆ.

ಚುನಾವಣೆಗೂ ಮುನ್ನ ಕಲಬುರಗಿ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಅಲ್ಲಂಪ್ರಭು ಪಾಟೀಲ್ಗೆ ಟಿಕೆಟ್ ನೀಡದಂತೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಇನ್ನುಳಿದ ಟಿಕೆಟ್ ಆಕಾಂಕ್ಷಿಗಳಿಂದ ಪತ್ರ ಬರೆಯಲಾಗಿದೆ.

ಕಲಬುರಗಿ ದಕ್ಷಿಣ ಮತಕ್ಷೇತ್ರದಿಂದ ಈ ಬಾರಿ ಹೊಸ ಮುಖಕ್ಕೆ ಟಿಕೆಟ್ ಕೊಡಲು ಪತ್ರದಲ್ಲಿ ಮನವಿ ಮಾಡಿದ್ದು, ಕಳೆದ ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದ ಪಾಟೀಲ್ಗೆ ಟಿಕೆಟ್‌ ನೀಡದಂತೆ ಸಂತೋಷ ಬಿಲಗುಂದಿ, ಸಂತೋಷ ಪಾಟೀಲ್, ಕೃಷ್ಣ ಕುಲಕರ್ಣಿ, ಅಶೋಕ್ ಗೂಳಿ ಪತ್ರ ಬರೆದಿದ್ದಾರೆ.

ಅಲ್ಲಂಪ್ರಭು ಪಾಟೀಲ್ ಹೆಸರು ಹೇಳದೆ, ಹೊಸ ಮುಖಕ್ಕೆ ಅವಕಾಶ ನೀಡಬೇಕು ಎಂದು ಪಕ್ಷದ ವರಿಷ್ಠ ನಾಯಕರಿಗೆ ಮನವಿ ಮಾಡಿದ್ದಾರೆ. ಟಿಕೆಟ್ ಘೋಷಣೆ ಮಾಡುವುದಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಸಲುವಾಗಿ ಇದೀಗ ಭಿನ್ನಮತ ಸ್ಪೋಟಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!