ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆನ್ಡ್ರೈವ್ ಪ್ರಕರಣ ಭಾರಿ ಸಂಚಲನ ಮೂಡಿಸಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಆರ್ಥಿಕವಾಗಿ ಕಟ್ಟಿಹಾಕಲು ಎಸ್ಐಟಿ ನಿರ್ಧರಿಸಿದೆ.
ಹೌದು, ಪ್ರಜ್ವಲ್ ರೇವಣ್ಣ ಅವರ ಎಲ್ಲಾ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಈಗಾಗಲೇ ಪ್ರಜ್ವಲ್ ಖಾತೆಗೆ ಹಣ ಜಮಾ ಆಗಿದೆ ಎಂಬ ಎಲ್ಲ ಮಾಹಿತಿಗಳನ್ನು ಎಸ್ ಐಟಿ ಕಲೆಹಾಕಿದೆ. ಎಸ್ಐಟಿ ಮೂಲಗಳ ಪ್ರಕಾರ, ಪ್ರಜ್ವಲ್ ಏಳು ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಅಧಿಕಾರಿಗಳು ಈ ಬ್ಯಾಂಕ್ಗಳಿಂದ ಸಂಪೂರ್ಣ ಮಾಹಿತಿ ಕೇಳಿದ್ದಾರೆ.
ಪ್ರಜ್ವಲ್ ತಲೆಮರೆಸಿಕೊಂಡು ತಿಂಗಳಾಗಿದ್ದು, ಇನ್ನೂ ಪತ್ತೆಯಾಗದ ಕಾರಣ ಈ ಕ್ರಮ ಕೈಗೊಳ್ಳಲು ಅಧಿಕಾರಿಗಳು ನಿರ್ಧರಿಸಿದ್ದಾರೆ.