ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾರ್ ಹೆಡ್ ಬಾತುಕೋಳಿ ಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ಚಿಂತಿಸಿದೆ.
ನಟ ದರ್ಶನ್ ಮಾತ್ರವಲ್ಲದೆ ಪತ್ನಿ ವಿಜಯಲಕ್ಷ್ಮಿ ಕೂಡ ಈ ಕೇಸ್ ನಲ್ಲಿ ಆರೋಪಿಯಾಗಿದ್ದಾರೆ. ಮೈಸೂರು ಜಿಲ್ಲೆಯ ನರಸೀಪುರದಲ್ಲಿರುವ ದರ್ಶನ್ ತೋಟದಲ್ಲಿ ಕಾನೂನು ಬಾಹಿರವಾಗಿ ಬಾರ್ ಹೆಡ್ ಬಾತುಕೋಳಿ ಸಾಕಲಾಗಿತ್ತು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು.
ದರ್ಶನ್ ಪತ್ನಿ ವಿಜಯಲಕ್ಷ್ಮಿ A1 ಹಾಗೂ ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ಅಲಿಯಾಸ್ ನಾಗ A2 ಹಾಗೂ ನಟ ದರ್ಶನ್ A3 ಆರೋಪಿ ಆಗಿದ್ದರು. ಐದು ಬಾರಿ ನೊಟೀಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ.
ಇತ್ತ ಪ್ರಕರಣ ಸಂಬಂಧ ದರ್ಶನ್‌ನನ್ನು ಬಂಧಿಸದೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿತ್ತು. ಇದೀಗ ಅರಣ್ಯ ಇಲಾಖೆಯು ಈ ಪ್ರಕರಣವನ್ನು ಚುರುಕುಗೊಳಿಸಿದೆ.