spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಸಚಿವರಿಂದ ಆಹಾರ ಕಿಟ್ ವಿತರಣೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮೈಸೂರು:

ಚಲನಚಿತ್ರ ಸಹ ಕಲಾವಿದರು ಮತ್ತು ಹವ್ಯಾಸಿ ರಂಗಕರ್ಮಿಗಳಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಕೃಷಿ ಸಚಿವ ಬಿ.ಸಿ.ಪಾಟೀಲ್ ಉಪಸ್ಥಿತಿಯಲ್ಲಿ ಆಹಾರ ಕಿಟ್ ವಿತರಣೆ ಮಾಡಿ ಲಸಿಕಾಕರಣಕ್ಕೆ ಚಾಲನೆ ನೀಡಲಾಯಿತು.

ಸಚಿವ ಎಸ್.ಟಿ.ಸೋಮಶೇಖರ್ ಅವರು 520 ಆಹಾರ ಕಿಟ್‌ಗಳನ್ನು ನೀಡಿದ್ದು, ಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ 400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆ ಅಧ್ಯಕ್ಷ ಎನ್.ವಿ. ಫಣೀಶ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಎ.ಎಂ.ಯೋಗೀಶ್, ನಗರಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಡಿಸಿಪಿ ಗೀತಾ ಪ್ರಸನ್ನ, ರಂಗಕರ್ಮಿಗಳಾದ ಬಸವಲಿಂಗಯ್ಯ, ಮಂಡ್ಯ ರಮೇಶ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss