ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಶಾಕಿರಣ ಕಾರ್ಯಕ್ರಮದ ಅಂಗವಾಗಿ 8 ಜಿಲ್ಲೆಗಳ ಎಲ್ಲಾ ಜನರಿಗೆ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದೆ. ಸುಮಾರು 2.45 ಲಕ್ಷ ದೃಷ್ಟಿ ದೋಷ ಇರುವವರಿಗೆ ಉಚಿತ ಕನ್ನಡಕ ವಿತರಿಸುವ ಕಾರ್ಯಕ್ರಮ ನಾಳೆಯಿಂದ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಆಶಾಕಿರಣ’ ಯೋಜನೆಯು ದೃಷ್ಟಿ ದೋಷ ಇರುವವರಿಗೆ ಬೆಳಕು ನೀಡಲಿದೆ. ಈ ಯೋಜನೆಯನ್ನು ಹಂತಹಂತವಾಗಿ ರಾಜ್ಯಾದ್ಯಂತ ಜಾರಿಗೆ ತರಲಾಗುವುದು ಎಂದರು.
ಸಿದ್ದರಾಮಯ್ಯ ಅವರು ಭಾನುವಾರ ಹಾವೇರಿಯಲ್ಲಿ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.