ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ಪೌಷ್ಠಿಕ ಆಹಾರವಾದ ರಾಗಿ ಮಾಲ್ಟ್ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಒಟ್ಟಾರೆ 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ಸರ್ಕಾರ ನಿರ್ಧರಿಸಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ರಾಗಿ ಮಾಲ್ಟ್‌ನಲ್ಲಿ ಹೈ ಪ್ರೋಟೀನ್, ಕ್ಯಾಲ್ಶಿಯಂ ಇರುವ ಕಾರಣ ಮಕ್ಕಳಿಗೆ ಇದನ್ನು ನೀಡಲಾಗುತ್ತದೆ.