Tuesday, June 6, 2023

Latest Posts

ಕೋವಿಡ್’ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಣೆ

ಹೊಸದಿಗಂತ ವರದಿ,ಸೋಮವಾರಪೇಟೆ:

ಇತ್ತೀಚೆಗೆ ಕೋವಿಡ್’ನಿಂದ ಮೃತಪಟ್ಟ ಕುಟುಂಬಗಳಿಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಪರಿಹಾರದ ಚೆಕ್ ವಿತರಿಸಿದರು.
ಪಟ್ಟಣದ ಶಾಸಕರ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲೂಕಿನ 24 ಹಾಗೂ ಕುಶಾಲನಗರ ತಾಲೂಕಿನ14 ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ ಗಳ ಚೆಕ್ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ಕೊರೋನಾ ದಿಂದಾಗಿ ಕುಟುಂಬಕ್ಕೆ ಆಧಾ್ರವಾಗಿದ್ದ ಹಲವಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂತಹ ಕುಟುಂಬಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿ.ಪಿ.ಎಲ್ ಕುಟುಂಬಗಳಿಗೆ 1.5 ಲಕ್ಷ ಹಾಗೂ ಎ. ಪಿ.ಎಲ್.ಕುಟುಂಬಗಳಿಗೆ 50 ಸಾವಿರ ರೂ ನೀಡುತ್ತಿದ್ದು ಈಗಾಗಲೇ 50 ಸಾವಿರ ರೂ‌.ಊ ಸಂಬಂಧಿಸಿದವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದರು.
ಈ ಸಂದರ್ಭ ತಹಶೀಲ್ದಾರ್ ಗೋವಿಂದರಾಜು,ಪಟ್ಟಣ ಪಂಚಾಯಿತಿ ಅಧ್ಯಕ್ಷ ಚಂದ್ರು, ಮುಖ್ಯಾಧಿಕಾರಿ ನಾಚಪ್ಪ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!